Friday, 30 October 2026
ರಾಜ್ಯ

ದೆಹಲಿ ಕರ್ನಾಟಕ ಸಂಘದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ: ರಾಷ್ಟ್ರಧ್ವಜಕ್ಕೆ ಗೌರವ ನಮನ

ದೆಹಲಿ ಕರ್ನಾಟಕ ಸಂಘವು ಕಲ್ಯಾಣ ಕನ್ನಡಿಗರ ಸಾಂಸ್ಕೃತಿಕ ಟ್ರಸ್ಟ್‌, ನವದೆಹಲಿ ಇವರ ಸಹಯೋಗದೊಂದಿಗೆ ದಿನಾಂಕ 17.09.2026 ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಆರ್‌. ರೇಣುಕುಮಾರ್‌ ಆರ್‌., ಮತ್ತು ಗೌರವ ಉಪಸ್ಥಿತರಿದ್ದ ಮಾಜಿ ಶಾಸಕರಾದ ಶ್ರೀ ಮಲ್ಲಿಕಾರ್ಜುನ ಖುಬಾ ಹಾಗೂ ಕರ್ಣಾಟಕ ಬ್ಯಾಂಕಿನ ಜನರಲ್‌ ಮ್ಯಾನೇಜರ್‌ ಶ್ರೀ ಬಸವರಾಜ ಎಸ್‌. ದೇಸಳ್ಳಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ರಾಧಾಕೃಷ್ಣ, ಕಲ್ಯಾಣ ಕನ್ನಡಿಗರ ಸಾಂಸ್ಕೃತಿಕ ಟ್ರಸ್ಟ್‌ನ ಗೌರವ ಅಧ್ಯಕ್ಷ ಶ್ರೀ ವಿ.ವಿ. ಬಿರಾದಾರ, ಅಧ್ಯಕ್ಷ ಡಾ. ಎಸ್‌.ಎಲ್‌. ಭಂಡಾರ್‌ಕರ, ಪ್ರಧಾನ ಕಾರ್ಯದರ್ಶಿ ಶ್ರೀ ರಾಜಕುಮಾರ ನೀಲೂರ ಮತ್ತು ಇನ್ನೂ ಅನೇಕ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *